ಅಭಿಪ್ರಾಯ / ಸಲಹೆಗಳು

ಸಬ್‌ ಅರ್ಬನ್‌ ಪೊಲೀಸ ಠಾಣೆ :- ಮಾನ್ಯ ನ್ಯಾಯಾಲಯದಿಂದ ಫಿರ್ಯಾದಿ ನ್ಯಾಯಾಲಯದ ಮುಖಾಂತರ ಉಲ್ಲೇಖಿತ ದೂರು ಸಲ್ಲಿಸಿದರ ಸಾರಾಂಶವೇನೆಂದರೆ ದಿನಾಂಕ ೧೦.೦೮.೨೦೨೨ & ೧೧.೦೮.೨೦೨೨ ರಂದು ಬೆಳಗಿನ ೦೯-೧೫ ಗಂಡೆಯ ಸುಮಾರಿಗೆ  ಆಪಾದಿತನು ಇಸ್ಲಾಮಿಕ ಇಂಟರನ್ಯಾಷನಲ್ ಶಾಲೆಗೆ ತಮ್ಮ ಮಕ್ಕಳನ್ನು ಬಿಡಲು ಬಂದು ಮಕ್ಕಳಿಗೆ ಯಾಕೆ  ಲೇಟಾಗಿ ಕರೆದುಕೊಂಡು ಬಂದಿರಿ ಅಂತಾ ಮಕ್ಕಳಿಗೆ ಹೊರಗಡೆ ನಿಲ್ಲಿಸಿದ್ದಕ್ಕೆ ಫರ‍್ಯಾದಿಯೊಂದಿಗೆ ಜಗಳ ತೆಗೆದುಹ್ರೆಡೆದು ಅವಾಚ್ಯವಾಗಿ ಬ್ಶೆದು ಜೀವದ ಭಯ ಹಾಕಿ ಶಾಲಾ ಆವರಣದಲ್ಲಿ ಪ್ರವೇಶ ಮಾಡಿ ಶಾಲೆಯ ವಾತಾವರಣ ಕಲುಷಿತಗೊಳಿಸಿರುತ್ತಾನೆ ಅಂತಾ ನ್ಯಾಯಾಲಯಕ್ಕೆ ಕೋರಿಕೊಂಡ ಮೇರೆಗೆ ನ್ಯಾಯಾಲಯದ ನಿರ್ದೇಶನದಂತೆ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

 

ಫರಹತಾಬಾದ ಪೊಲೀಸ ಠಾಣೆ :-  ದಿನಾಂಕ:04.12.2022 ರಂದು 5.30 ಪಿಎಮ್ ಗಂಟೆಗೆ ನಮ್ಮ ಠಾಣೆಯ ಧರ್ಮಣ್ಣಾ ಸಿಹೆಚ್ಸಿ 219 ರವರು ಠಾಣೆಗೆ ಹಾಜರಾಗಿ ಮುದ್ದೆಮಾಲು, ಜಪ್ತಿ ಪಂಚನಾಮೆ, 6 ಜನ ಆರೋಪಿತರೊಂದಿಗೆ ಮುಂದಿನ ಕ್ರಮಕ್ಕಾಗಿ ವರದಿ ಹಾಜರಪಡಿಸಿದರ ಸಾರಾಂಶವೇನೆಂದರೆ, ಇಂದು ದಿನಾಂಕ: 04.12.2022 ರಂದು ಮದ್ಯಾಹ್ನ 2:45 ಗಂಟೆಯ ಸುಮಾರಿಗೆ ನಾನು ಪೊಲೀಸ್ ಠಾಣೆಯಲ್ಲಿದ್ದಾಗ ಭಾತ್ಮಿ ಬಂದಿದ್ದೇನೆಂದರೆ, ನಮ್ಮ ಠಾಣೆಯ ವ್ಯಾಪ್ತಿಯ ನಂದಿಕೂರ ಗ್ರಾಮದ ಅಂಭಾಬವಾನಿ ಗುಡಿಯ ಹತ್ತಿರ ಸಾರ್ವಜನಿಕ ಸ್ಥಳದ ಖುಲ್ಲಾ ಜಾಗೆಯಲ್ಲಿ ಕೆಲವು ಜನರು ಇಸ್ಪೀಟ ಜೂಜಾಟ ಆಡುತ್ತಿದ್ದಾರೆ ಅಂತಾ ಖಚಿತ ಬಾತ್ಮಿ ಬಂದ ಮೇರೆಗೆ ನಮ್ಮ ಠಾಣಾ ಸಿಬ್ಬಂದಿ ಜನರಾದ ಎಮ್.ಆರ್.ಪಟೇಲ್ ಸಿಪಿಸಿ 339 ರಾಜಕುಮಾರ ಸಿ.ಪಿ.ಸಿ 477, ದುಗರ್ೆಶ ಸಿಪಿಸಿ 288 ಮಂಜುನಾಥ ಸಿಪಿಸಿ 391 ರವರಿಗೆ ಜೂಜಾಟದ ಬಗ್ಗೆ ಮಾಹಿತಿ ತಿಳಿಸಿ ನಂತರ ನಮ್ಮ ಪಿಐ ಸಾಹೇಬರಿಗೆ ಹಾಗೂ ಮಾನ್ಯ ಎಸಿಪಿ ಸಾಹೇಬರು ಸಬ್ ಅರ್ಬನ್ ಉಪವಿಭಾಗ ಕಲಬುರಗಿ ರವರಿಗೆ ಮಾಹಿತಿ ತಿಳಿಸಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಜನರಿಗೆ ಖಾಸಗಿ ವಾಹನದಲ್ಲಿ ಕರೆದುಕೊಂಡು ಠಾಣೆಯಿಂದ ಮದ್ಯಾಹ್ನ 3:00 ಗಂಟೆಗೆ ಹೊರಟ್ಟು, ಭಾತ್ಮಿ ಸ್ಥಳಕ್ಕೆ ಹೊರಡುವಾಗ ಮಾರ್ಗಮಧ್ಯೆ ದಾರಿ ಹೊಕ್ಕ ಇಬ್ಬರೂ ಪಂಚರನ್ನು ಬರಮಾಡಿಕೊಂಡು ಅವರಿಗೂ ಭಾತ್ಮಿ ಬಂದ ವಿಷಯ ತಿಳಿಸಿ ಅವರು ನಮ್ಮೊಂದಿಗೆ ದಾಳಿ ಕಾಲಕ್ಕೆ ಹಾಜರಿರಲು ಒಪ್ಪಿದ ಮೇರೆಗೆ ಅವರನ್ನು ನಮ್ಮೊಂದಿಗೆ ಖಾಸಗಿ ವಾಹನದಲ್ಲಿ ಕರೆದುಕೊಂಡು ಹೊರಟು ಭಾತ್ಮೀ ಸ್ಥಳದ ಹತ್ತಿರ ಮದ್ಯಾಹ್ನ 3.30 ಗಂಟೆಗೆ ಗಿಡಗಳ ಮರೆಯಲ್ಲಿ ನಿಂತು ನೋಡಲು ಸಾರ್ವಜನಿಕ ಸ್ಥಳದಲ್ಲಿ ಕುಳಿತು ಕೆಲವು ಜನರು ದುಂಡಾಗಿ ಇಸ್ಪೇಟ ಎಲೆಗಳ ಸಹಾಯದಿಂದ ಅಂದರ ಬಾಹರ ಜೂಜಾಟ ಆಡುತ್ತಿರುವದನ್ನು ನೋಡಿ ಖಚಿತ ಪಡಿಸಿಕೊಂಡು ಮದ್ಯಾಹ್ನ 3.35 ಗಂಟೆಗೆ ಏಕಕಾಲಕ್ಕೆ ಪಂಚರ ಸಮಕ್ಷಮದಲ್ಲಿ ದಾಳಿ ಮಾಡಲಾಗಿ ಜನರಿಗೆ ಹಿಡಿದು ಅವರಿಗೆ ಅಂಗಶೋಧ ಮಾಡಿ ಹೆಸರು ವಿಳಾಸ ಕೇಳಲು 1) ಮಲ್ಲಿನಾಥ ತಂದೆ ನಿಂಗಣ್ಣ ಪೂಜಾರಿ ವಯ: 31 ವರ್ಷ ಉ: ಕೂಲಿ ಜಾತಿ: ಕುರುಬ ಸಾ: ಟೆಂಗಡಿ ತಾ; ಚಿತ್ತಾಪೂರ 2) ಯಲ್ಲಾಲಿಂಗ ತಂದೆ ಮಲಯ್ಯ  ವಯ: 36 ವರ್ಷ ಉ: ಟೈಲರಿಂಗ  ಜಾತಿ: ಇಳಿಗಾ ಸಾ: ನಂದಿಕೂರ 3) ಬಸಲಿಂಗಪ್ಪಾ ತಂದೆ ಶರಣಪ್ಪಾ  ವಯ: 32 ವರ್ಷ ಜಾತಿ: ಲಿಂಗಾಯತ ಉ: ಚಾಲಕ ಸಾ: ಗಾಜಿಪೂರ ಕಲಬುರಗಿ 4) ಮಲ್ಲಣ್ಣ ತಂದೆ ಶಿವರಾಯ ವಯ: 52 ವರ್ಷ ಉ: ಒಕ್ಕಲುತನ ಜಾತಿ: ಲಿಂಗಾಯತ ಸಾ: ನಂದಿಕೂರ 5) ಮಹೇಶ ತಂದೆ ದೇವಿಂದ್ರ  ವಯ: 41 ವರ್ಷ ಜಾತಿ: ಲಿಂಗಾಯತ ಉ: ಕೂಲಿ ಕೆಲಸ ಸಾ: ನಂದಿಕೂರ 6) ಪವನ ತಂದೆ ರಾಮದಾಸ ವಯ: 30 ವರ್ಷ ಉ: ಕೂಲಿ ಜಾತಿ: ಎಸ್.ಸಿ ಸಾ: ನಂದಿಕೂರ ಅಂತಾ ತಿಳಿಸಿದ್ದು, ಸದರಿ ಸ್ಥಳದಲ್ಲಿ 52 ಇಸ್ಪೇಟ ಎಲೆಗಳು ಹಾಗೂ ನಗದು ಹಣ 15550/- ರೂ. ಸಿಕ್ಕಿದ್ದು ಇವುಗಳನ್ನು ಪಂಚರ ಸಮಕ್ಷಮದಲ್ಲಿ 3.40 ಪಿಎಮ್ ಗಂಟೆಯಿಂದ 4.40 ಪಿಎಮ್ ಗಂಟೆಯವರೆಗೆ ಗುನ್ನೆ ಸ್ಥಳದಲ್ಲಿ ಕುಳಿತು ಜಪ್ತಿ ಪಂಚನಾಮೆಯನ್ನು ಬರೆದು ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

ಇತ್ತೀಚಿನ ನವೀಕರಣ​ : 06-12-2022 04:42 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080