ಅಭಿಪ್ರಾಯ / ಸಲಹೆಗಳು

ಫರಹತಾಬಾದ ಪೊಲೀಸ ಠಾಣೆ :- ದಿನಾಂಕ: ೧೩.೦೨.೨೦೨೨ ರಂದು ಸಾಯಂಕಾಲ ೬ ಗಂಟೆಗೆ ನಮ್ಮ ಠಾಣೆಯ ರಾಮಣ್ಣಾ ಸಿಹೆಚ್ಸಿ ೨೧೯ ರವರು ಠಾಣೆಗೆ ಹಾಜರಾಗಿ ಮುದ್ದೆಮಾಲು, ಜಪ್ತಿ ಪಂಚನಾಮೆ, ೨ ಜನ ಆರೋಪಿತರೊಂದಿಗೆ ಮುಂದಿನ ಕ್ರಮಕ್ಕಾಗಿ ವರದಿ ಹಾಜರಪಡಿಸಿದರ ಸಾರಾಂಶವೇನೆಂದರೆ, ದಿನಾಂಕ:೧೩.೦೨.೨೦೨೨ ರಂದು ಮದ್ಯಾಹ್ನ ೩.೩೦ ಗಂಟೆಯ ಸುಮಾರಿಗೆ ನಾನು ಪೊಲೀಸ್ ಠಾಣೆಯಲ್ಲಿದ್ದಾಗ ಭಾತ್ಮಿ ಬಂದಿದ್ದೇನೆಂದರೆ, ನಮ್ಮ ಠಾಣೆಯ ವ್ಯಾಪ್ತಿಯ ಖಣದಾಳ ತಾಂಡಾದ ಗುಂಪಾ ಹತ್ತಿರ ಸಾರ್ವಜನಿಕ ಸ್ಥಳದ ಖುಲ್ಲಾ ಜಾಗೆಯಲ್ಲಿ ಕೆಲವು ಜನರು ಇಸ್ಪೀಟ ಜೂಜಾಟ ಆಡುತ್ತಿದ್ದಾರೆ ಅಂತಾ ಖಚಿತ ಬಾತ್ಮಿ ಬಂದ ಮೇರೆಗೆ ನಮ್ಮ ಠಾಣಾ ಸಿಬ್ಬಂದಿ ಜನರಾದ ಮಂಜುನಾಥ ಸಿಪಿಸಿ, ತಿರುಪತಿ ಸಿಪಿಸಿ, ಆನಂದ ಸಿಪಿಸಿ, ಮಹಿಬೂಬ ಸಿಪಿಸಿ ರವರಿಗೆ ಜೂಜಾಟದ ಬಗ್ಗೆ ಮಾಹಿತಿ ತಿಳಿಸಿ ನಂತರ ನಮ್ಮ ಪಿಐ ಸಾಹೇಬರಿಗೆ ಹಾಗೂ ಮಾನ್ಯ ಎಸಿಪಿ ಸಾಹೇಬರು ಸಬ್ ಅರ್ಬನ್ ಉಪ ವಿಭಾಗ ಕಲಬುರಗಿ ರವರಿಗೆ ಮಾಹಿತಿ ತಿಳಿಸಿ ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಜನರಿಗೆ ಖಾಸಗಿ ವಾಹನದಲ್ಲಿ ಕರೆದುಕೊಂಡು ಠಾಣೆಯಿಂದ ಮದ್ಯಾಹ್ನ ೩.೪೫ ಗಂಟೆಗೆ ಹೊರಟ್ಟು, ಭಾತ್ಮಿ ಸ್ಥಳಕ್ಕೆ ಹೊರಡುವಾಗ ಮಾರ್ಗಮಧ್ಯೆ ದಾರಿ ಹೊಕ್ಕ ಇಬ್ಬರೂ ಪಂಚರನ್ನು ಬರಮಾಡಿಕೊಂಡು ಅವರಿಗೂ ಭಾತ್ಮಿ ಬಂದ ವಿಷಯ ತಿಳಿಸಿ ಅವರು ನಮ್ಮೊಂದಿಗೆ ದಾಳಿ ಕಾಲಕ್ಕೆ ಹಾಜರಿರಲು ಒಪ್ಪಿದ ಮೇರೆಗೆ ಅವರನ್ನು ನಮ್ಮೊಂದಿಗೆ ಖಾಸಗಿ ವಾಹನದಲ್ಲಿ ಕರೆದುಕೊಂಡು ಹೊರಟು ಭಾತ್ಮೀ ಸ್ಥಳದ ಹತ್ತಿರ ಸಾಯಂಕಾಲ ೪ ಗಂಟೆಗೆ ಮನೆಗಳ ಮರೆಯಲ್ಲಿ ನಿಂತು ನೋಡಲು ಸಾರ್ವಜನಿಕ ಸ್ಥಳದಲ್ಲಿ ಕುಳಿತು ಕೆಲವು ಜನರು ದುಂಡಾಗಿ ಇಸ್ಪೇಟ ಎಲೆಗಳ ಸಹಾಯದಿಂದ ಅಂದರ ಬಾಹರ ಜೂಜಾಟ ಆಡುತ್ತಿರುವದನ್ನು ನೋಡಿ ಖಚಿತ ಪಡಿಸಿಕೊಂಡು ಸಾಯಂಕಾಲ ೪.೦೫ ಗಂಟೆಗೆ ಏಕಕಾಲಕ್ಕೆ ಪಂಚರ ಸಮಕ್ಷಮದಲ್ಲಿ ದಾಳಿ ಮಾಡಲಾಗಿ ಜೂಜಾಟದಲ್ಲಿ ತೊಡಗಿದ ಕೆಲವು ಜನರು ಓಡಿ ಹೋಗಿದ್ದು ಇನ್ನು ಕೆಲವು ಜನರಿಗೆ ಸಿಕ್ಕಿದ್ದು ಸಿಕ್ಕಿದ ಜನರಿಗೆ ಹಿಡಿದು ಅವರಿಗೆ ಅಂಗಶೋಧ ಮಾಡಿ ಹೆಸರು ವಿಳಾಸ ಕೇಳಲು ೧) ಮೋಹನ ತಂದೆ ಬಾಬುಸಿಂಗ್ ರಾಠೋಡ ವಯ:೩೦ ವರ್ಷ ಉ:ಒಕ್ಕಲುತನ ಜಾತಿ: ಲಂಬಾಣಿ ಸಾ:ಖಣದಾಳ ತಾಂಡಾ ೨) ಪ್ರದೀಪ ತಂದೆ ಪಾಂಡು ರಾಠೋಡ ವಯ: ೨೮ ವರ್ಷ ಉ:ಕೂಲಿಕೆಲಸ ಜಾತಿ: ಲಂಬಾಣಿ ಸಾ:ಖಣದಾಳ ತಾಂಡಾ ೩) ಅರ್ಜುನ ತಂದೆ ಶಿವರಾಮ ರಾಠೋಡ ವಯ:೨೭ ವರ್ಷ ಉ:ಕೂಲಿಕೆಲಸ ಜಾತಿ: ಲಂಬಾಣಿ ಸಾ:ಖಣದಾಳ ತಾಂಡಾ ೪) ರಾಮು ತಂದೆ ಮೋತಿರಾಮ ಚಹ್ವಾಣ ವಯ:೩೪ ವರ್ಷ ಉ:ಕೂಲಿಕೆಲಸ ಜಾತಿ:ಲಂಬಾಣಿ ಸಾ:ಖಣದಾಳ ೫) ಸಂತೋಷ ತಂದೆ ಗೋಪಿನಾಥ ರಾಠೋಡ ವಯ:೩೦ ವರ್ಷ ಉ:ಕೂಲಿಕೆಲಸ ಜಾತಿ:ಲಂಬಾಣಿ  ಸಾ:ಖಣದಾಳ ತಾಂಡಾ ಅಂತಾ ತಿಳಿಸಿದ್ದು, ಸದರಿ ಸ್ಥಳದಲ್ಲಿ ೫೨ ಇಸ್ಪೇಟ ಎಲೆಗಳು ಹಾಗೂ ನಗದು ಹಣ ೫೧೦೦/-ರೂ. ಸಿಕ್ಕಿದ್ದು ಇವುಗಳನ್ನು ಪಂಚರ ಸಮಕ್ಷಮದಲ್ಲಿ ೪.೦೫ ಪಿಎಮ್ ಗಂಟೆಯಿಂದ ೫.೦೫ ಪಿಎಮ್ ಗಂಟೆಯವರೆಗೆ ಗುನ್ನೆ ಸ್ಥಳದಲ್ಲಿ ಕುಳಿತು ಜಪ್ತಿ ಪಂಚನಾಮೆ ಬರೆದು ಮುಗಿಸಲಾಯಿತು. ನಂತರ ಮುದ್ದೇಮಾಲು ಮತ್ತು ಆರೋಪಿತರೊಂದಿಗೆ ೬ ಪಿಎಮ್ ಗಂಟೆಗೆ ಠಾಣೆಗೆ ಬಂದಿದ್ದು, ಸದರಿ ಆರೋಪಿತರ ವಿರುದ್ದ ಕಾನೂನು ಕ್ರಮ ಜರುಗಿಸಲು ಕೊರಲಾಗಿದೆ ಅಂತಾ ಇತ್ಯಾದಿ ಸಾರಾಂಶದ ಮೇಲಿಂದ ಗುನ್ನೆ ದಾಖಲು ಮಾಡಿಕೊಂಡ ಬಗ್ಗೆ ವರದಿ.

 

ಇತ್ತೀಚಿನ ನವೀಕರಣ​ : 15-02-2022 01:12 PM ಅನುಮೋದಕರು: ADMIN


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಲಬುರಗಿ ನಗರ ಪೊಲೀಸ್‌
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080